![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್ : ದೇಶದಲ್ಲಿ ಆತ್ಮಹತ್ಯೆ ಪ್ರಕರಣಗಳು ಸಾಕಷ್ಟು ಕಂಡುಬರುತ್ತಿವೆ. ಅದರಲ್ಲೂ ದಿನಗೂಲಿ ನೌಕರರು ವಿವಿಧ ಒತ್ತಡಗಳಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮೂರು ವರ್ಷಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಪೌರಕಾರ್ಮಿಕರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿಯನ್ನು ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
ಹೌದು 2019ರಿಂದ 2021ರವರೆಗೆ ಒಟ್ಟು 1.12 ಲಕ್ಷ ದಿನಗೂಲಿ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಇದೇ ಸಮಯದಲ್ಲಿ 66,912 ಗೃಹಿಣಿಯರು, 53,661 ಸ್ವ ಉದ್ಯೋಗಿಗಳು, 43,420 ವೇತನದಾರರು ಮತ್ತು 43,385 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ, ಈ ಮೂರು ವರ್ಷಗಳಲ್ಲಿ 35,950 ವಿದ್ಯಾರ್ಥಿಗಳು, 31,839 ಕೃಷಿಕರು ಮತ್ತು ಕೃಷಿ ಕಾರ್ಮಿಕರು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]