
K2 ನ್ಯೂಸ್ ಡೆಸ್ಕ್ : ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕಾರ್ಖಾನೆಗಳ ಮಸೂದೆಯನ್ನು ಅಂಗೀಕಾರ ಮಾಡಿದ್ದು. ಈ ಮೂಲಕ ಇನ್ನು ಮುಂದೆ ರಾಜ್ಯದಲ್ಲಿ 12 ಗಂಟೆಗಳ ಕಾಲ ಕಾರ್ಮಿಕರು ಕೆಲಸ ನಿರ್ವಹಿಸಬೇಕು ಮತ್ತು ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಬೇಕು ಎಂಬ ನಿಯಮಗಳು ಮುಂದಿನ ದಿನದಲ್ಲಿ ಜಾರಿಯಾಗಲಿದೆ.
ಹೌದು ರಾಜ್ಯ ಸರ್ಕಾರ ಹೊಸ ಪ್ಲಾನ್ ಮಾಡಿದೆ. ರಾಜ್ಯದ ಕಾರ್ಖಾನೆಗಳಲ್ಲಿ ಕೆಲಸದ ಅವಧಿಯನ್ನು 9 ಗಂಟೆಗಳಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಮತ್ತು ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ವಿಧಾನಸಭೆಯಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟ ಕಾರ್ಖಾನೆಗಳ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದರಿಂದಾಗಿ ಕೆಲಸದ ಅವಧಿ ಹೆಚ್ಚಲಿದ್ದು, ವಾರದಲ್ಲಿ ನಾಲ್ಕು ದಿನ ಮಾತ್ರ ಕೆಲಸ ಮಾಡಬೇಕಾಗುತ್ತದೆ. ಉಳಿದ ದಿನ ಪಾವತಿ ರಜೆ ಇರುತ್ತದೆ.
![]() |
![]() |
![]() |
![]() |
![]() |
[ays_poll id=3]