This is the title of the web page
This is the title of the web page
Local NewsState NewsVideo News

ಹಾಸ್ಟೆಲ್ ಊಟ ಸೇವಿಸಿದ ನಂತರ 14 ವಿದ್ಯಾರ್ಥಿಯರು ಅಸ್ವಸ್ಥ..


K2kannadanews.in

ಮಾನ್ವಿ : ಹಾಸ್ಟೆಲ್​ನಲ್ಲಿ ಊಟ (hostels food) ಸೇವಿಸಿದ ನಂತರ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ (students sick) ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ರಾಯಚೂರು(Raichur) ಜಿಲ್ಲೆಯ ಮಾನ್ವಿmanvi) ಪಟ್ಟಣದ ಮೆಟ್ರಿಕ್ ಪೂರ್ವ ಹಾಸ್ಟೆಲ್ ನಲ್ಲಿ ಘಟನೆ ಜರುಗಿದ್ದು, ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿನಿ ಪರಿಸ್ಥಿತಿ ಗಂಭೀರವಾಗಿದ್ದು (situation is serious), ಹೆಚ್ಚಿನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ (RIMS Hospital) ದಾಖಲಿಸಲಾಗಿದೆ. ಭಾನುವಾರ ಮಧ್ಯಾಹ್ನ ಪಲಾವ್ (palav) ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ಏಕಾಏಕಿ ವಾಂತಿ-ಭೇದಿ (Vomiting-dysentery) ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥಗೊಂಡ 14 ವಿದ್ಯಾರ್ಥಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್(warden) ಹಾಸ್ಟೆಲ್​ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.


[ays_poll id=3]