This is the title of the web page
This is the title of the web page
Local News

2020ನೇ ಬ್ಯಾಚುನ ಫಲಿತಾಂಶ ಬಿಡುಗಡೆಗೆ ಒತ್ತಾಯ


ರಾಯಚೂರು : ಓಇಕೆ ಮೊದಲ ಬ್ಯಾಚನ 2020 ಪದವಿ ವಿದ್ಯಾರ್ಥಿಗಳ ಫಲಿತಾಂಶ ಬಿಡುಗಡೆಗೆ ಮತ್ತು ವಿತರಣೆ ಆಗದೇ ಇರುವ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡಬೇಕೆಂದು ಸರ್ಕಾರಿ ಪ್ರಥಮ ದರ್ಜೇ ಕಾಲೇಜಿನ ಮಹಿಳಾ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದ ಪದವಿ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ಎನ್‌ಇಪಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ. ಆದರೂ ಸಹ ಮೊದಲ ವರ್ಷದ ಫಲಿತಾಂಶ ಬಿಡುಗಡೆಯಾಗಿಲ್ಲ ಮತ್ತು ವಿದ್ಯಾರ್ಥಿವೇತನ ವಿತರಣೆ ಆಗದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಪೂರೈಕೆಗಾಗಿ ವಿದ್ಯಾರ್ಥಿ ವೇತನದ ಮೇಲೆ ಅವಲಂಬಿತರಾಗಿರುತ್ತಾರೆ. ವಿದ್ಯಾರ್ಥಿವೇತನ ಸಿಗದಿದ್ದರೆ, ಅವರಲ್ಲಿ ಬಹುಪಾಲು ಜನ ಶಿಕ್ಷಣವನ್ನು ಪೂರೈಸುವುದೆ ಕಷ್ಟಕರವಾಗುತ್ತದೆ.

ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲ. ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಕೂಡಲೇ ಮೊದಲ ಬ್ಯಾಚ್ ನ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಿ, ವಿದ್ಯಾರ್ಥಿ ವೇತನವನ್ನು ಸಂಪೂರ್ಣವಾಗಿ ವಿತರಿಸಿ, ಹಾಸ್ಟೆಲ್ ಗಳ ಸಂಖ್ಯೆ ಹಾಗೂ ದಾಖಲಾತಿಯನ್ನು ಹೆಚ್ಚಿಸಿ, ಮಹಿಳಾ ಪದವಿ ಕಾಲೇಜ್ ಗೆ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.


[ays_poll id=3]