This is the title of the web page
This is the title of the web page
State News

40% ಕಮಿಷನ್ ಆರೋಪ : ತನಿಖೆ ಖಚಿತ


K2 ಪೊಲಿಟಿಕಲ್ ನ್ಯೂಸ್ : ಕಳೆದ ಬಿಜೆಪಿ ಸರ್ಕಾರದಲ್ಲಿ ಗಂಭೀರವಾಗಿ ಆರೋಪ ಮಾಡಲಾಗಿದ್ದ 40% ಕಮಿಷನ್ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್ ಐ ನೇಮಕಾತಿ ಹಗರಣ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ. 40% ಕಮಿಷನ್ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮಗೆ ಬೇಕಾದವರಿಗೆ ಭೂಮಿ ಕೊಟ್ಟಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಮಾಹಿತಿ ಕಲೆ ಹಾಕಲು ಸಚಿವ ಕೃಷ್ಣ ಬೈರೇಗೌಡರಿಗೆ ಸೂಚನೆ ನೀಡಿದ್ದೇನೆ. ಯಾರೋ ಹೇಳಿದರು ಎಂದು ತನಿಖೆ ಮಾಡಲು ಸಾಧ್ಯವಿಲ್ಲ. ನಾವು ಶ್ರೀನಿವಾಸ ಪೂಜಾರಿ ಅಥವಾ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿಕೊಂಡು ತನಿಖೆ ಮಾಡಬೇಕಿಲ್ಲ ಎಂದರು.


[ays_poll id=3]