This is the title of the web page
This is the title of the web page
Local NewsState NewsVideo News

ವಸತಿ ನಿಲಯದಲ್ಲಿ ಉಪಹಾರ ಸೇವಿಸಿದ 45 ವಿದ್ಯಾರ್ಥಿನಿಯರು ಅಸ್ವಸ್ಥ..!


K2kannadanews.in

student sick ರಾಯಚೂರು : ಪರಿಶಿಷ್ಟ ಪಂಗಡಕ್ಕೆ (ST hostel) ಸೇರಿದ ವಸತಿ ನಿಲಯದಲ್ಲಿ ಬೆಳಗಿನ ಉಪಹಾರ (Brsckfast) ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು (Students) ಅಸ್ವಸ್ಥಗೊಂಡು ಆಸ್ಪತ್ರೆ ಪಾಲಾದ ಘಟನೆ ಅರಕೆರ ಪಟ್ಟಣದಲ್ಲಿ ನಡೆದಿದೆ.

ಹೌದು ರಾಯಚೂರು (Raichur) ಜಿಲ್ಲೆಯ ಅರಕೆರ (arkera) ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಬೆಳಗ್ಗೆ (Morning) ಒಗ್ಗರಣೆ ತಿಂದು ವಿದ್ಯಾರ್ಥಿಗಳು ಶಾಲೆಗಳಿಗೆ (school) ಹೋಗಲು ಸಿದ್ಧವಾದ (Ready) ಸಂದರ್ಭದಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಆರಂಭದಲ್ಲಿ 20 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿಸಲಾಗಿತ್ತು. ತದನಂತರ ವಿದ್ಯಾರ್ಥಿನಿಯರ ಸಂಖ್ಯೆ 45ಕ್ಕೆ ಏರಿದೆ. ಸದ್ಯ ಎಲ್ಲಾ ವಿದ್ಯಾರ್ಥಿನಿಯರಿಗೂ ಕೂಡ ಅರಕೆರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (Health center) ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿತಿದ್ದಂತೆ ಆತಂಕಗೊಂಡ ಪಾಲಕರು (Parents) ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ವೇಳೆ ತಾಲೂಕು ಮಟ್ಟದ ಅಧಿಕಾರಿಗಳು (Officers) ಕೂಡ ಆಸ್ಪತ್ರೆಗೆ ದೌಡಾಯಿಸಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥರಾಗಲು ಕಾರಣ ಇನ್ನು ತಿಳಿದು ಬಂದಿಲ್ಲ.

 


[ays_poll id=3]