K2kannadanews.in
compensation ರಾಯಚೂರು : ಶಿಕ್ಷಕರ ದಿನಾಚಣೆ ಹಿನ್ನೆಲೆ ಖುಷಿಯಿಂದ ಹೊರಟಿದ್ದ ವಿದ್ಯಾರ್ಥಿಗಳು, ಜವರಾಯನ ಪಾದ ಸೇರಿದ ದುರ್ಘಟನೆಯೊಂದು ರಾಯಚೂರು ಜಿಲ್ಲೆಯಲ್ಲಿ ಜರುಗಿದೆ. ಶಾಲೆಗೆ ಹೋದ ಮಕ್ಕಳು, ಶವವಾದ ಮಾಹಿತಿ ತಿಳಿದ ಪೊಷಕರ ಆಕ್ರಂದನ ಮುಗಿಲು ಮುಟ್ಟಿತ್ತು, ಘಟನೆಗೆ ಸ್ಪಂದಿಸಿದ ಸಿಎಂ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ನಿತೀಶ್ ಕೆ. ಮುಖ್ಯಮಂತ್ರಿಗಳು ಘಟನೆ ಬಗ್ಗೆ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದು ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.
ಪ್ರಸ್ತುತ ಕೆಎಸ್ ಆರ್ ಟಿಸಿ ಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಹಾಗು ಗಂಭೀರವಾಗಿ ಗಾಯಗೊಂಡ ಗಾಯಾಳುಗಳಿಗೆ 3 ಲಕ್ಷ ಪರಿಹಾರ ಕೊಡಿಸಲಾಗುವುದು. ಚಿಕಿತ್ಸೆಗೆ ಇಲ್ಲಿ ವ್ಯವಸ್ಥೆ ಇಲ್ಲದಿದ್ದರೆ ಬೇರೆಡೆ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆ ಮರುಕಳಿದಂತೆ ನೋಡಿಕಿಳ್ಳಿ ಎಂದು ಸೂಚಿಸಿದ್ದಾರೆ ಅಂತ ತಿಳಿಸಿದ್ದಾರೆ.