This is the title of the web page
This is the title of the web page
Crime NewsState News

ಆಟ ಆಡುವ ವಯಸ್ಸು : 7ನೇ ತರಗತಿ ವಿದ್ಯಾರ್ಥಿನಿ ಈಗ 6 ತಿಂಗಳ ಗರ್ಭಿಣಿ..!


K2kannadanews.in

Sexual Assault News Desk : 13 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual Assault) ಎಸಗಿರುವ ಕೃತ್ಯವೊಂದು ನಡೆದಿದ್ದು, ಇದೀಗ ಬಾಲಕಿ 6 ತಿಂಗಳ ಗರ್ಭಿಣಿ ಎಂಬ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಹೌದು ಚಿಕ್ಕಬಳ್ಳಾಪುರದಲ್ಲಿ (Chikkaballapura) ಘಟನೆ ಬೆಳಕಿಗೆ ಬಂದಿದ್ದು, 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿದ್ದು, ಸಂಬಂಧಿ ಯುವಕನಿಂದಲೇ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಬಾಲಕಿಗೆ ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ ಎನ್ನಲಾಗುತ್ತಿದೆ. ಈ ಬಗ್ಗೆ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿದ್ದಾರೆ. ಚಿಕ್ಕಬಳ್ಳಾಪುರ (Chikkaballapura) ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಬಾಲಕಿಯನ್ನ ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.


[ays_poll id=3]