This is the title of the web page
This is the title of the web page
Local News

ಅದ್ದೂರಿಯಾಗಿ ಜರುಗಿದ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣ


ರಾಯಚೂರು : 77ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ, ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣುಪ್ರಕಾಶ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.

ರಾಯಚೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದರು. ಈ ವೇಳೆ 14 ತಂಡಗಳಿಂದ ಆಕರ್ಷಕ ಪತ ಸಂಚಲನವನ್ನು ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಅರಣ್ಯ ಇಲಾಖೆ ಮತ್ತು ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪತಸಂಚಲ ಮಾಡಲಾಯಿತು. ಈ ವೇಳೆ ಸಚಿವರು ಪಥ ಸಂಚಲನದಲ್ಲಿ ಭಾಗವಹಿಸಿದ ಎಲ್ಲಾ ತಂಡಗಳ ಪರಿವೀಕ್ಷಣೆಯನ್ನ ಮಾಡಿ, ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಸಂಸದ ರಾಜ ಅಮರೇಶ್ವರ ನಾಯಕ್, ಗ್ರಾಮ ಸರ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ್ ನಾಯಕ್. ಎಸ್ಪಿ ನಿಖಿಲ್ ಬಿ, ಸಿಇಓ ರಾಹುಲ್ ಪಾಂಡ್ಯೆ ತುಕಾರಾಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.


[ays_poll id=3]