K2kannadanews.in
Political News ರಾಯಚೂರು : ಮಾಜಿ ಸಿಎಂ (Ex-CM) ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ (resignation) ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ (Election commission) ಉಪಚುನಾವಣೆ (By election) ಘೋಷಣೆ ಮಾಡಿದೆ. ಈ ಚುನಾವಣೆಯಲ್ಲಿ ಸಿಂಧನೂರಿನ ಬಸನಗೌಡ ಬಾದರ್ಲಿ ಆಯ್ಕೆಯಾಗುವ ಎಲ್ಲಾ ಸೂಚನೆಗಳು ಕಂಡುಬರುತ್ತಿವೆ.
ವಿಧಾನಸಭೆ (Legislative Assembly)ಯಿಂದ ವಿಧಾನಪರಿಷತ್‌ಗೆ (Legislative Council)
ಆಯ್ಕೆಯಾಗುವ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿದೆ. ಇದೇ ತಿಂಗಳು 25ರಂದು ಚುನಾವಣೆಗೆ ಅಧಿಸೂಚನೆ (Notification) ಪ್ರಕಟವಾಗಲಿದ್ದು, ಜು.2ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜು.3ರಂದು ನಾಮಪತ್ರಗಳ (nomination) ಪರಿಶೀಲನೆ ನಡೆಯಲಿದೆ. ಜು.5ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜು.12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ (Voting) ಜರುಗಲಿದೆ. ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ (BJP) ತೊರೆದು ಕಾಂಗ್ರೆಸ್ (congress) ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಸರ್ಕಾರವು ವಿಧಾನಪರಿಷತ್‌ಗೆ ಆಯ್ಕೆ ಮಾಡಿತ್ತು. ಕಾರಣಾಂತರಗಳಿಂದ ಜ.25ರಂದು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದ್ದರು. ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇರೆಗೆ ಈ ಸ್ಥಾನ ಆಡಳಿತಾರೂಢ ಕಾಂಗ್ರೆಸ್ ಪಾಲಾಗುವುದು ನಿಶ್ಚಿತ. ಈಗಾಗಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಬಸವನಗೌಡ ಬಾದರ್ಲಿ ಅವರ ಹೆಸರನ್ನು ಘೋಷಿಸಿದೆ. ಹೀಗಾಗಿ, ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ.