K2kannadanews.in
Students sick ಮಾನ್ವಿ : ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ 33 ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಇಲ್ಲಿ199 ಕ್ಕೂ ಹೆಚ್ಚು ಬಾಲಕ, ಬಾಲಕಿಯರು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇಲ್ಲಿನ ನೀರನ್ನು ಶುದ್ದೀಕರಿಸುವುದಕ್ಕಾಗಿ ನೀರಿನ ಟ್ಯಾಂಕಿನಲ್ಲಿ ಹೆಚ್ಚಿನ ಪ್ರಾಮಾಣದಲ್ಲಿ ಬ್ಲೀಚಿಂಗ್ ಪುಡಿಯನ್ನು ಬೆರೆಸಿದ್ದಾರೆ. ಇದೆ ನೀರನ್ನು ಉಪಯೋಗಿಸಿ ಕಳೆದ ರಾತ್ರಿ ಅಡುಗೆ ಮಾಡಿರುವುದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಮತ್ತು ಹೊಟ್ಟೆ ನೋವಿನ ಲಕ್ಷಣಗಳು ಕಂಡುಬಂದಿದೆ. ಕೂಡಲೇ ಅವರನ್ನು ವಸತಿ ನಿಲಯದ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ವಸತಿ ನಿಲಯದ 33 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ದಾಖಲಿಸಿಕೊಂಡು ಅಗತ್ಯವಾದ ಎಲ್ಲಾ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ 2 ವಿದ್ಯಾರ್ಥಿಗಳನ್ನು ರಾಯಚೂರು ರಿಮ್ಸ್ ಆಸ್ಪತ್ರೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳ ಅರೋಗ್ಯ ಪರೀಕ್ಷೆಯನ್ನು ವೈದ್ಯರ ತಂಡದಿಂದ ನಡೆಸಲಾಗುತ್ತಿದ್ದು, ಅಗತ್ಯ ಇರುವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಅಹಾರದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇನ್ನು ಮಕ್ಕಳಿಗೆ ವಾಂತಿ ಬೇರೆ ಕಾಣಿಸಿಕೊಂಡ ವಿಚಾರ ಪಾಲಕರಲ್ಲಿ ತಿಳಿಸದೆ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.