ಪವರ್ ಟಿವಿ ಪ್ರಸಾರಕ್ಕೆ ಸುಪ್ರೀಂ ಅಸ್ತು : ರಾಜಕೀಯ ದ್ವೇಷ ಎಂದ ನ್ಯಾಯಾಧೀಶರು..

K 2 Kannada News
ಪವರ್ ಟಿವಿ ಪ್ರಸಾರಕ್ಕೆ ಸುಪ್ರೀಂ ಅಸ್ತು : ರಾಜಕೀಯ ದ್ವೇಷ ಎಂದ ನ್ಯಾಯಾಧೀಶರು..
Oplus_0
WhatsApp Group Join Now
Telegram Group Join Now

K2kannadanews.in

Supreme Court ನವದೆಹಲಿ : ಪವರ್ ಟಿವಿ (power TV) ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಪವರ್ ಟಿವಿ ಪ್ರಸಾರಕ್ಕೆ ಗ್ರೀನ್ ಸಿಗ್ನಲ್ (Green signal) ಕೊಟ್ಟಿದ್ದು ಸತ್ಯಕ್ಕೆ ಜಯ ಸಿಕ್ಕಂತಾಗಿದೆ.

ಪವರ್ ಟಿವಿ ತನ್ನ ಪರವಾನಗಿಯನ್ನ 2021ರಿಂದ ನವೀಕರಣ ಮಾಡಿಕೊಂಡಿಲ್ಲ ಎಂದು ಆಪಾದಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನೋ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು.

ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಸಾರಥ್ಯದ ಪೀಠವು, ಈ ವಿಚಾರದ ಕುರಿತಾಗಿ ನಾವು ಇನ್ನೇನೂ ಕೇಳಲು ಬಯಸೋದಿಲ್ಲ. ಇದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ. ಅವರ ದನಿಯನ್ನು ಸಂಪೂರ್ಣವಾಗಿ ಕುಗ್ಗಿಸುವ  ಉದ್ದೇಶವಾಗಿತ್ತು. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹಿಡಿಯಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.

WhatsApp Group Join Now
Telegram Group Join Now
Share This Article