K2kannadanews.in
Krishna river flood ಲಿಂಗಸೂಗೂರು : ನಾರಾಯಣಪುರ ಜಲಾಶಯದಿಂದ ಒಂದು ಲಕ್ಷ ನೀರನ್ನ ನದಿಗೆ ಬಿಡಲಾಗಿದ್ದು, ಲಿಂಗಸ್ಗೂರು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೆ ಶೀಲಹಳ್ಳಿ ಸೇತುವೆ ಮುಳುಗಡೆ ಹಂತ ತಲುಪಿದ್ದು, ಗ್ರಾಮಾಂತರ ಭಾಗಗಳಿಗೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.
ದೇವದುರ್ಗ, ಲಿಂಗಸುಗೂರು ಮತ್ತು ರಾಯಚೂರು ತಾಲ್ಲೂಕಿನ ಸುಮಾರು 60ಕ್ಕೂ ಹೆಚ್ಚಿನ ಹಳ್ಳಿಗಳು ಪ್ರವಾಹಕ್ಕೆ ಸಿಲುಕಲಿವೆ. ಪ್ರಸ್ತುತ 1.50 ಲಕ್ಷ ಕ್ಯೂಸೆಕ್ ನೀರು ಮಾತ್ರ ಬಿಟ್ಟಿರುವುದರಿಂದ ಕೆಲ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಎದುರಾಗಿದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಮೇಲ್ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಹೊರಹರಿವು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಪ್ರವಾಹ ಭೀತಿಯು ಎದುರಾಗಿದೆ. ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ನಾಳೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. 2.40 ಲಕ್ಷ ಕ್ಯುಸೆಕ್ ನೀರು ಹರಿಸಿದಲ್ಲಿ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ.