K2kannadanews.in
Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್ ನಲ್ಲಿ ವೀಕ್ಷಿಸಿ.
ರಾಯಚೂರು ಯುವ ಬ್ರಿಗೇಡ್ (Yuva briged) ವತಿಯಿಂದ ನಾಳೆ ಕಾರ್ಗಿಲ್ ವಿಜಯೋತ್ಸವವನ್ನು, ನಗರದ ಪಂಡಿತ್ ಜಂಬಲದಿನ್ನಿ ಸಿದ್ದರಾಮ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ. ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ, ಜಿಲ್ಲೆಯ ಸೈನಿಕರು ಯಾರಿಲ್ಲ ಭಾಗಿಯಾಗಿದ್ದರು ಅವರನ್ನು ಗುರುತಿಸಿ, ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ. ವಿಶೇಷವಾಗಿ ಕಾರ್ಯಕ್ರಮದಲ್ಲಿ ದಿಕ್ಸೂಚಿ ವಿಶೇಷ ಉಪನ್ಯಾಸ ಚಕ್ರವರ್ತಿ ಸೂಲಿಬೆಲೆ ಅವರು ನೀಡದಿದ್ದಾರೆ ಎಂದರು.
ಬಿಜೆಪಿಯಿಂದ ಬೇಸತ್ತಿದ್ದ ಜನ ಕಾಂಗ್ರೆಸ್ ಪಕ್ಷವನ್ನ ಉತ್ತಮ ಸಂವಿಧಾನ ಆಡಳಿತಕ್ಕಾಗಿ ಅಧಿಕಾರಕ್ಕೆ ಬಂದರೆ ಕಳೆದ ಒಂದುವರೆ ವರ್ಷದಿಂದ ಈ ಒಂದು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ವಾಲ್ಮೀಕಿ ನಿಗಮದ ಹಗರಣ ಮತ್ತು ಮೂಡ ಹಗರಣದಲ್ಲಿ ಸಾಕಷ್ಟು ಪಾರದರ್ಶಕ ಆಗಬೇಕಾಗಿದೆ ಅಲ್ಲದೇ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25ರಂದು ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ಹಮ್ಮಿಕೊಂಡಿದೆ ಎಂದು ರವೀಂದ್ರ ಪಟ್ಟಿ ಹೇಳಿದರು.
ವಾಹನಗಳಿಗೆ ಜಿಪಿಎಸ್ ಪ್ಯಾನಿಕ್ ಬಟನ್ ಅಳವಡಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ, ಈ ಒಂದು ಆದೇಶವನ್ನು ವಿರೋಧಿಸಿ, ಸರ್ಕಾರದ ಆದೇಶದ ವಿರುದ್ಧ, ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ, ವಾಹನ ಚಾಲಕರ ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರಸ್ತುತ ಸಣ್ಣ ವಾಹನ ಚಾಲಕರು ಜೀವನ ನಡೆಸುವುದು ಕಷ್ಟವಾಗಿದೆ. ಸರಿಯಾದ ಬಾಡಿಗೆ ಸಿಗುತ್ತಿಲ್ಲ. ಈ ಒಂದು ಸಂದರ್ಭದಲ್ಲಿ ಜಿಪಿಎಸ್ ಪ್ಯಾನಿಕ್ ಬಟನ್ ಅಳವಡಿಸಲು 18 ಸಾವಿರದಷ್ಟು ಬೇಕಾಗುತ್ತದೆ. ಈ ಒಂದು ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ವಿದ್ಯಾರ್ಥಿಗಳು, ಕೃಷಿ ಖಾಸಗಿ ವಿಶ್ವವಿದ್ಯಾಲಯಗಳಿಗೆ ಪರವಾನಿಗೆ / ಅಫಿಲಿಯೆಷನ್ ನೀಡಬಾರದು ಎಂದು ಒತ್ತಾಯಿಸಿ, ಪ್ರತಿಭಟನಾ ಮೆರವಣಿಗೆ ಮಾಡಿದರು. ತದನಂತರ ಆಡಳಿತಾತ್ಮಕ ವಿಭಾಗದ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರಹಾಕಿ, ಕೂಡಲೇ ಈ ಒಂದು ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ, ಕುಲಪತಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.