ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು..

K 2 Kannada News
ಬಸ್ ಸ್ಟೇರಿಂಗ್ ಕಟ್ ಆಗಿ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು..
Oplus_131072
WhatsApp Group Join Now
Telegram Group Join Now

K2kannadanews.in

Bus accident Died ಮಾನ್ವಿ : ಹಳ್ಳದ ಸೇತುವೆಯ (Bridge) ತಡೆಗೋಡೆಗೆ ಈಶಾನ್ಯ ಸಾರಿಗೆ ಬಸ್ ಡಿಕ್ಕಿ (collision) ಹೊಡೆದು ಹಳ್ಳಕ್ಕೆ ಬಿದ್ದ ಘಟನೆಗೆ ಹಿನ್ನೆಲೆ ರಿಮ್ಸ್ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟಿದ್ದಾಳೆ.

ರಾಯಚೂರು (Raichur) ಜಿಲ್ಲೆಯ ಮಾನ್ವಿ (manvi) ತಾಲೂಕಿನ ನಂದಿಹಾಳ ಗ್ರಾಮದ ಬಳಿ ಘಟನೆ ಜರುಗಿದ್ದು, KA36 F1366 ಬಸ್ಸಿನ ಸ್ಟೇರಿಂಗ್ (String) ರಾಡ್ ತುಂಡಾಗಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಚಾಲಕನ (driver) ನಿಯಂತ್ರಣ ತಪ್ಪಿ (out of control) ಹಳ್ಳಕ್ಕೆ ಇಳಿದಿದೆ. ಬಸ್ಸಿಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು, ಈ ವೇಳೆ ಅಪಘಾತಕ್ಕೆ ಒಳಗಾಗಿದ್ದ ಸಂದರ್ಭದಲ್ಲಿ ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದರು.

ಗಂಭೀರವಾಗಿ ಗಾಯಗೊಂಡವರನ್ನು ಪ್ರಾಥಮಿಕವಾಗಿ ಮಾನ್ವಿ (Manvi) ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಟ್ಟು, ನಂತರ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ರವಾನಿಸಲಾಗಿತ್ತು. ಅಪಘಾತದಲ್ಲಿ ಬಾನು (Banu) ಎಂಬ ಮಹಿಳೆಗೆ ಬೆನ್ನು ಮೂಳೆ ಮುರೆದಿತ್ತು (Back bone broken) ಎಂದು ಹೇಳಲಾಗುತ್ತಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಗಾಯಾಳು 60 ವರ್ಷದ ಬಾನು ಎಂಬುವವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Share This Article