K2kannadanews.in
Candle march ರಾಯಚೂರು : ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ, ಸಾವಿಗೆ ನ್ಯಾಯ ಒದಗಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಮೇಣದಬತ್ತಿ ಹಿಡಿದು ಪ್ರತಿಭಟನಾ ಮೆರವಣಿಗೆ ಮಾಡಿ, ಕಾಲೇಜು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ಹೊರಹಾಕಿದರು.
ಹೌದು ರಾಯಚೂರು ನಗರದ ರಿಮ್ಸ್ ವೈದ್ಯಕೀಯ ಆಸ್ಪತ್ರೆಯ ವಿದ್ಯಾರ್ಥಿಗಳು ಮೇಣದಬತ್ತಿ ಹಿಡಿದು ಪ್ರತಿಭಟನೆ ಮಾಡಿದರು. ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ೨೪ ಗಂಟೆಗಳ ಮುಷ್ಕರ ನಡೆಸಲು ಕರೆ ನೀಡಿದ್ದರ ಭಾಗವಾಗಿ, ರಿಮ್ಸ್ ಮೆಡಿಕಲ್ ಕಾಲೇಜಿನಿಂದ ಮುಖ್ಯ ದ್ವಾರದ ಮುಖಾಂತರ ರಿಮ್ಸ್ ಆಸ್ಪತ್ರೆಯ ವರೆಗೆ ಮೇಣದಬತ್ತಿ ಮತ್ತು ಮೊಬೈಲ್ ಟಾರ್ಚ್ಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ಮಾಡಿದರು. ಕಾಲೇಜು ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಮೃತ ವೈದ್ಯಕೀಯ ವಿದ್ಯಾರ್ಥಿ ಸಾವಿಗೆ ನ್ಯಾಯ ಸಿಗಬೇಕಿದೆ ನಾವು ನ್ಯಾಯದ ಪರವಾಗಿ ಹೋರಾಟ ಮಾಡುತ್ತಿದ್ದೇವೆ ಎನ್ನುತ್ತಿದ್ದೇವೆ ಎಂದರು.