ಓವರ್ ಟೇಟ್ ಮಾಡುವ ಭರದಲ್ಲಿ ಶವವಾದ ಭಯಾನಕ ಘಟನೆ ಸಿಸಿ ಟಿವಿಯಲ್ಲಿ ಸೆರೆ..

K 2 Kannada News
ಓವರ್ ಟೇಟ್ ಮಾಡುವ ಭರದಲ್ಲಿ ಶವವಾದ ಭಯಾನಕ ಘಟನೆ ಸಿಸಿ ಟಿವಿಯಲ್ಲಿ ಸೆರೆ..
Oplus_131072
WhatsApp Group Join Now
Telegram Group Join Now

K2kannadanews.in

Accident News ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಟೈಮ್ ಉಳಿಸುವ ನೆಪದಲ್ಲಿ ಅತಿಯಾದ ವೇಗಕ್ಕೆ ಒಂದಾಗಿ ಜೀವ ಕಳೆದುಕೊಳ್ಳುವ ಅದೆಷ್ಟು ಘಟನೆಗಳು ನಮ್ಮ ಮುಂದೆ ನಡೆಯುತ್ತಿವೆ ಆದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ಟ್ರಾಫಿಕ್ ಇರುವ ರಸ್ತೆಯಲ್ಲಿ ಬೈಕ್ ಸವಾರನೋರ್ವ ಲಾರಿ ಓವರ್ ಟೇಕ್ ಮಾಡಲು ಹೋಗಿ ಹಿಂಬದಿ ಗಾಲಿಗೆ ಬಿದ್ದು ಮೃತಪಟ್ಟ ಘಟನೆ ಚನ್ನಸಂದ್ರದಲ್ಲಿ ನಡೆದಿದೆ.

ಬೆಂಗಳೂರಿನ ಚನ್ನಸಂದ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೀಡಿಯೋವನ್ನು X ನಲ್ಲಿ ನಮ್ಮ ಬೆಂಗಳೂರು ಅಪ್ಡೇಟ್ಸ್ ಖಾತೆಯಿಂದ ಅಪ್ಲೋಡ್ ಮಾಡಲಾಗಿದ್ದು, ಚನ್ನಸಂದ್ರ ಮುಖ್ಯ ರಸ್ತೆಯಲ್ಲಿ ನೀರಿನ ಟ್ಯಾಂಕರ್ ಒಂದು ಹೋಗುತ್ತಿತ್ತು. ಈ ವೇಳೆ ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಸ್ಕೂಟಿ ಸಾವಾರ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುವ ವ್ಯಕ್ತಿಗೆ ಡಿಕ್ಕಿ ಹೊಡೆದಿದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಟ್ಯಾಂಕರ್‌ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ.

ಅಪಘಾತದ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡಿದರೆ ಮೈ ಝುಂ ಎನಿಸುತ್ತದೆ. ಘಟನೆಯ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article