K2kannadanews.in
construction day ದೇವದುರ್ಗ : ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ದಾಖಲೆಯ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದವರೆಗೆ ರಾಜ್ಯದ 31ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ನಿಂದ ಕೊಪ್ಪರ, ಗುಂಡುಗುರ್ತಿ, ದೇವದುರ್ಗ, ಕರಿಗುಡ್ಡ, ಅಮರಾಪೂರ ಕ್ರಾಸ್, ಜಾಲಹಳ್ಳಿ, ಚಿಂಚೋಡಿ, ಬುಂಕಲದೊಡ್ಡಿ, ತಿಂಥಣಿ ಬ್ರಿಡ್ಜ್ ನಿಂದ ಲಿಂಗಸೂಗೂರು ತಾಲೂಕಿನ ಗುರುಗುಂಟಾ, ಲಿಂಗಸೂಗೂರು, ಈಚನಾಳ ತಾಂಡಾ, ಈಚನನಾಳ, ಸುಂಕನಾಳ ಮೂಲಕ ರೋಡಲಬಂಡಾದವರೆಗೂ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 16 ಗ್ರಾಮಗಳ ಮೂಲಕ 109ಕಿ.ಮೀ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರಿದರು. ಕಾರ್ಯಕ್ರಮದಲ್ಲಿ ರಾಯಚೂರು ಸಹಾಯಕ ಆಯುಕ್ತಾರದ ಗಜಾನನ ಬಾಳೆ ಅವರು ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಭೋದಿಸಿದರು.