K2kannadanews.in
Justice for Protest ರಾಯಚೂರು : ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರಾಯಚೂರು ಬಂದ್ ಕರೆ ನೀಡುವ ಮುಖಾಂತರ ಹೋರಾಟ ಆರಂಭಿಸಲಾಗಿದೆ.
ಕಳೆದ 30 ವರ್ಷಗಳಿಂದ ರಾಯಚೂರು ಜಿಲ್ಲೆಯಲ್ಲಿ ಆರಂಭವಾಗಿರುವ ಒಳ ಮೀಸಲಾತಿಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ ಆದರೆ ಒಳ ಮೀಸಲಾತಿ ಜಾರಿ ಮಾಡಲು ನ್ಯಾಯಾಲಯ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದ್ದು ಇದನ್ನು ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಇಂದು ಒಳಮಿಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ಸಿಕ್ಕಿದೆ.
ರಾಯಚೂರು ಜಿಲ್ಲೆಯ ಅದ್ಯಂತ ಸ್ವಯಂ ಪ್ರೇರಿತವಾಗಿ ಎಲ್ಲಾ ವ್ಯಾಪಾರಸ್ಥರು ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡುವ ಮುಖಾಂತರ ಬಂದ್ ಗೆ ಸ್ವಯಂ ಪ್ರೇರಿತವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.