K2kannadanews.in
Special train ರಾಯಚೂರು : ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಬೆಂಗಳೂರು, ರಾಯಚೂರು ಹಾಗೂ ಕಲಬುರಗಿ ಮಧ್ಯೆ 2 ಟ್ರಿಪ್ ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್- ರಾಯಚೂರು- ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.
ಬೆಂಗಳೂರು ಕಲಬುರಗಿ ವಿಶೇಷ ಎಕ್ಸ್ಪ್ರೆಸ್ ರೈಲು 06533 ಅಕ್ಟೋಬರ್ 30 ಮತ್ತು ನವೆಂಬರ್ 2ರಂದು ಸಂಚರಿಸಲಿದೆ. ಕಲಬುರಗಿ ಎಸ್‌ಎಂವಿಟಿ ವಿಶೇಷ ಎಕ್ಸ್ಪ್ರೆಸ್ ರೈಲು 06533 ಅಕ್ಟೋಬರ್ 31 ಮತ್ತು ನವೆಂಬರ್ 3ರಂದು ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್, ಕಲಬುರಗಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.