ಜಿಲ್ಲಾ ಪೊಲೀಸ್ ಕವಾಯತ್ತು ಮೈದಾನದಲ್ಲಿ ಹುತಾತ್ಮ ದಿನ ಆಚರಣೆ.

K 2 Kannada News
ಜಿಲ್ಲಾ ಪೊಲೀಸ್ ಕವಾಯತ್ತು ಮೈದಾನದಲ್ಲಿ ಹುತಾತ್ಮ ದಿನ ಆಚರಣೆ.
WhatsApp Group Join Now
Telegram Group Join Now

K2kannadanews.in

Martyr’s Day ರಾಯಚೂರು : ಜಿಲ್ಲಾ ಪೊಲೀಸ್‌ ಕವಾಯತ್ತು ಮೈದಾನದ ಪೊಲೀಸ್ ಹುತಾತ್ಮರ ದಿನ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಛ ಇರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

ರಾಯಚೂರು ನಗರದ ಪೊಲೀಸ್‌ ಕವಾಯತ್ತು ಮೈದಾನದಲ್ಲಿ ಹುತಾತ್ಮ ದಿನ ಆಚರಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಕೆ. ನಿತೀಶ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶಿವಕುಮಾರ ಸೇರಿ ಅಧಿಕಾರಿಗಳು, ಅಥಿತಿಗಳು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ, ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಅತಿಥಿಗಳು ಪುಷ್ಪಗುಚ್ಛವಿರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೊಲೀಸ್‌ ಬ್ಯಾಂಡ್‌ನವರು ಶೋಕಗೀತೆ ನುಡಿಸಿದರು. ನಂತರ ಪೊಲೀಸ್‌ ಶಸ್ತ್ರಪಡೆಯ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸ್‌ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಪೊಲೀಸ್‌ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.

WhatsApp Group Join Now
Telegram Group Join Now
Share This Article