ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಪರಾರಿ..

K 2 Kannada News
ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಪರಾರಿ..
WhatsApp Group Join Now
Telegram Group Join Now

K2kannadanews.in

Crime News ಮಸ್ಕಿ : ಮನೆಯಲ್ಲಿ ಯಾರು ಇಲ್ಲದೆ ಒಂಟಿ ಮಹಿಳೆ ಇರುವುದನ್ನು ಗಮನಿಸಿದ ಕಾಮುಕನೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಮಾಡಿದ ಘಟನೆ ಮಸ್ಕಿ ತಾಲ್ಲೂಕಿನ ಕಾಟಗಲ್ ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಾಟಗಲ್ ಗ್ರಾಮದಲ್ಲಿ ಘಟನೆ ನಡೆದಿದ್ದು. ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲು ಏರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಭಾನುವಾರದಂದು ಸಂಜೆ 4 ಗಂಟೆಯ ಸುಮಾರಿಗೆ ಸಂತ್ರಸ್ಥಳು ಮನೆಯಲ್ಲಿ ಒಬ್ಬಳೆ ಇರುವುದನ್ನು ಗಮನಿಸಿದ ಕಾಮುಕ ಮನೆಯೊಳಗೆ ನುಗ್ಗಿ ಬಾಗಿಲು ಹಾಕಿಕೊಂಡಿದ್ದಾನೆ. ಇದನ್ನು ಗಮನಿಸಿದ ಮಹಿಳೆ ಯಾರು ಎಂದು ಕೇಳುವಷ್ಟರಲ್ಲಿ ಆಕೆಯ ಬಾಯಿಯನ್ನು ಮುಚ್ಚಿ, ಮೈಮೇಲೆ ಎರಗಿ, ಕೊಲೆ ಮಾಡುವ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರದ ವಿಚಾರ ಯಾರಿಗಾದರು ಹೇಳಿದರೆ ಕೊಲೆ ಮಾಡುವುದಾಗಿ ಜೀವದ ಬೆದರಿಕೆ ಹಾಕಿ ಓಡಿ ಹೋಗಿದ್ದಾನೆ ಎಂದು ಸತಸ್ಥ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಇನ್ನು ಅದೇ ಗ್ರಾಮದ ಬಸವರಾಜ್ (42) ನನ್ನ ಮೇಲೆ ಅತ್ಯಾಚಾರ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾಳೆ. ಪ್ರಕರಣದ ದಾಖಲಿಸಿಕೊಂಡ ಮಸ್ಕಿ ಪೊಲೀಸರು ತನಿಖೆ ಆರಂಬಿಸಿದ್ದು, ಆರೋಪಿಗಾಗಿ ಜಾಲ ಬೀಸಿದ್ದಾರೆ.

WhatsApp Group Join Now
Telegram Group Join Now
Share This Article