K2kannadanews.in
Crime News ಇಂದೋರ್ : ದೀಪಾವಳಿ ನಿಮಿತ್ಯ ಮನೆ ಮುಂದೆ ಅಲಂಕಾರ ಮಾಡಲು ರಂಗೋಲಿ ಬಿಡಿಸುತ್ತಿದ್ದ 14 ವರ್ಷದ ಬಾಲಕಿ ಮತ್ತು 21 ವರ್ಷದ ಯುವತಿ ಮೇಲೆ ಕಾರು ಹರಿದು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾದ ಘಟನೆ ಇಂದೋರ್ ನಲ್ಲಿ ನಡೆದಿದೆ.
ಹೌದು ಮಧ್ಯಪ್ರದೇಶದ ಇಂದೋರ್ ನಲ್ಲಿ ಈ ಒಂದು ಘಟನೆ ಜರುಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Video Viral) ಆಗಿದೆ, ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ 17 ವರ್ಷದ ಬಾಲಕ ಕಾರು ಅಪಘಾತವಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಡಿ ಸಿಲುಕಿದ ಬಾಲಕಿಯರು ಸಹಾಯಕ್ಕಾಗಿ ಕಿರುಚಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಿರಿದಾದ ರಸ್ತೆಯೊಂದರಲ್ಲಿ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದ ಅಂಗಡಿಯನ್ನು ಕೂಡ ಧ್ವಂಸ ಮಾಡಿದೆ.
ಘಟನೆಯಲ್ಲಿ ಪ್ರಿಯಾಂಶಿ (21) ಹಾಗೂ ನವ್ಯಾ (21) ಗಂಭೀರವಾಗಿ ಗಾಯಗೊಂಡಿದ್ದು, ಓರ್ವಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಅಪ್ರಾಪ್ತ ಪಾಲಕ ಹಾಗೂ ಪೋಷಕರ ವಿರುದ್ಧ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ.