K2kannadanews.in
Crime news ದೆಹೆಲಿ : ವಿಮಾನದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರು, ಇತ್ತೀಚೆಗೆ ಅಕ್ರಮ ವಸ್ತುಗಳನ್ನು ಸಾಗಿಸಲು ನಾನಾ ರೀತಿಯ ಕಸರತ್ತು ಐಡಿಯಾಗಳನ್ನ ಹಾಕಿ ಸಿಕ್ಕಿಬಿಡುವ, ಅನೇಕ ವಿಡಿಯೋಗಳು ವೈರಲ್ ಆಗುತ್ತಿವೆ. ಅಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಕಳ್ಳನ ಚಾಣಾಕ್ಷತನ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ.
ವ್ಯಕ್ತಿಯೊಬ್ಬ ವಿದೇಶದಿಂದ ತನ್ನ ಒಳ ಉಡುಪಿನಲ್ಲಿ ಚಿನ್ನವನ್ನು ಇಟ್ಟುಕೊಂಡು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕ ದೆಹಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ವೇಳೆ ಆತ ತನ್ನ ಒಳ ಉಡುಪಿನ ಪಟ್ಟಿಯಲ್ಲಿ ಮರೆಮಾಚಿ ಚಿನ್ನದ ತುಂಡುಗಳನ್ನ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ಮುಂದುವರೆದಿದ್ದು, ಆರೋಪಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ 1.320 ಗ್ರಾಂ ಚಿನ್ನವನ್ನ ಜಪ್ತಿ ಮಾಡಿದ್ದಾರೆ.