K2kannadanews.in
Cyclone Fengal ಚೆನೈ : ಫೆಂಗಲ್ ಚಂಡಮಾರುತದ ಅಬ್ಬರ ತಮಿಳುನಾಡಿನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದೆ. ಒಂದುಕಡೆ ರಣಮಳೆ, ಇನ್ನೊಂದುಕಡೆ ಭೂಕುಸಿತ, ಪ್ರವಾಹಸ್ಥಿತಿ ಎದುರಾಗಿದೆ. ಚಂಡಮಾರುತದ ಹೊಡೆತಕ್ಕೆ ಸಾವಿರಾರು ಕುಟುಂಬಗಳು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಇನ್ನೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದ್ದು, ಪ್ರವಾಹದ ನೀರಿನಿಂದ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಕೃಷ್ಣಗಿರಿಯಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದ್ದು, ಉತ್ತಂಗಿರಿ ಬಸ್ ನಿಲ್ದಾಣದಲ್ಲಿ ಹಲವಾರು ವಾಹನಗಳು ಪ್ರವಾಹ ಮುಳುಗಿವೆ. ಬಲವಾದ ಪ್ರವಾಹದಿಂದ ಬಸ್ ಗಳು ಮತ್ತು ಕಾರುಗಳು ಕೊಚ್ಚಿ ಹೋಗಿರುವುದು ಪರಿಸ್ಥಿತಿಯ ತೀವ್ರತೆಯನ್ನು ಎತ್ತಿ ತೋರಿಸಿದೆ. ಈ ಒಂದು ವಿಡಿಯೋ ವೈರಲ್ ಆಗುತ್ತಿದೆ.