ಪಾಠ ಕೇಳುತ್ತಿರುವಾಗಲೇ 14 ವರ್ಷದ ವಿದ್ಯಾರ್ಥಿನಿಗೆ ಹೃದಯಾಘಾತ ಸಾವು..

K 2 Kannada News
ಪಾಠ ಕೇಳುತ್ತಿರುವಾಗಲೇ 14 ವರ್ಷದ ವಿದ್ಯಾರ್ಥಿನಿಗೆ ಹೃದಯಾಘಾತ ಸಾವು..
WhatsApp Group Join Now
Telegram Group Join Now

K2kannadanews.in

Heart attack ವೈರಲ್ ಸುದ್ದಿ : ಹೃದಯ ಗಾತ ಎನ್ನುವುದು ಇದೀಗ ಸರ್ವೇಸಾಮಾನ್ಯ ಎನ್ನುವಂತಾಗಿದೆ. ಮಕ್ಕಳಿಂದ ಹಿಡಿದು ವಯಸ್ಕರವರಿಗೂ ಈ ಒಂದು ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಟೀಚರ್ ಪಾಠ ಮಾಡುತ್ತಿದ್ದ ವೇಳೆ ತರಗತಿಯಲ್ಲೇ ವಿದ್ಯಾರ್ಥಿನಿಗೆ ಹೃದಯಘಾತವಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಈ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು ತಮಿಳುನಾಡು ಚೆನ್ನೈನ ರಾಣಿಪೇಟೆಯಲ್ಲಿ ಈ ಒಂದು ಘಟನೆ ನಡೆದಿದ್ದು ನಡೆದಿದೆ. ಮೃತ ದುರ್ದೈವಿಯನ್ನು ಅದ್ವಿತಾ(14) ಎಂದು ಹೆಳಲಾಗುತ್ತಿದೆ. ಒಂಭತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಎಂದಿನಿಂತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ತರಗತಿಗೆ ಹಾಜರಾಗಿದ್ದಳು. ಬೆಳಗ್ಗೆ 11.30 ರ ಸುಮಾರಿಗೆ ಟೀಚರ್‌ ಪಾಠ ಮಾಡುತ್ತಿದ್ದರು. ಈ ವೇಳೆ ತನ್ನ ಸಹಪಾಠಿಗಳ ಜೊತೆ ಬೆಂಚ್‌ನಲ್ಲಿ ಕುಳಿತಿದ್ದ ಅದ್ವಿತಾ ಏಕಾಏಕಿ ಕುಳಿತಲ್ಲಿಂದಲೇ ಕುಸಿದಿದ್ದಾಳೆ.

ಇದರಿಂದ ಗಾಬರಿಗೊಂಡ ಸಹಪಾಠಿ ಕಿರುಚಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕಿ ಕೂಡಲೇ ಅದ್ವಿತಾ ನೆರವಿಗೆ ಧಾವಿಸಿದ್ದಾರೆ. ಇತರ ವಿದ್ಯಾರ್ಥಿಗಳ ಬಳಿ ಹೇಳಿ ಶಾಲೆಯ ಶಿಕ್ಷಕರನ್ನು ಕರೆದು ಕೂಡಲೇ ವಿದ್ಯಾರ್ಥಿನಿಯನ್ನು ಪಕ್ಕದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿನಿ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದಳು ಎಂದು ಬಾಲಕಿಯ ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

WhatsApp Group Join Now
Telegram Group Join Now
Share This Article