K2kannadanews.in
Crime News ಕವಿತಾಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಹಾಕಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳನ್ನು ಬಂದಿಸುವಂತೆ ಒತ್ತಾಯಿಸಿ ರಾತ್ರೋ ರಾತ್ರಿ ಪ್ರತಿಭಟನೆ ಮಾಡಲಾಗಿದೆ.
ಹೌದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದಲ್ಲಿ ನಡೆದಿದ್ದು, ಘಟನೆಯನ್ನು ಖಂಡಿಸಿ ಗ್ರಾಮದ ದಲಿತ ಮುಖಂಡರು ಪ್ರತಿಭಟನೆ ನಡೆದಿದ್ದಾರೆ ಗ್ರಾಮದೇವತೆ ಜಾತ್ರೆ ಅಂಗವಾಗಿ ಅಂಬೇಡ್ಕರ್ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಫ್ಲೆಕ್ಸ್ ಹರಿದು ಹಾಕಿದ್ದಾರೆ. ಅಲ್ಲದೇ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೆಲ ಕಿಡೀಗೇಡಿಗಳು ದಲಿತ ಸಮುದಾಯದ ಮನೆಗಳಿಗೆ ನುಗ್ಗಿ ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದಾರೆ.
ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಫ್ಲೆಕ್ಸ್ ಹರಿದ ಸ್ಥಳದಲ್ಲಿ ಜಮಾಯಿಸಿ ಗ್ರಾಮದ ಮುಖಂಡರು ಫ್ಲೆಕ್ಸ್ ಹರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯೂ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ್ದು, ಇನ್ನೂ ಯಾವುದೇ ದೂರು ದಾಖಲಾಗಿಲ್ಲ. ಪ್ರತಿಭಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿದ್ದಾರೆ.