K2kannadanews.in
Crime News ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದು, ಇಂದು ಅದೇ ರಾಜ್ಯದ ಬಾರಾಮುಲ್ಲಾದ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಸೇನೆ ಕೊಂದಿದೆ ಎಂದ ವರದಿಯಾಗಿದೆ.
ಜಮ್ಮು ಕಾಶ್ಮೀರದ ಬಾರಾಮುಲ್ಲಾದ ಉರಿ ಸೆಕ್ಟರ್ ಮೂಲಕ ಇಬ್ಬರು ಅಥವಾ ಮೂವರು ಉಗ್ರರು ಕಾಶ್ಮೀರಕ್ಕೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಸೇನೆ ತಿಳಿಸಿದೆ, ಇದರಿಂದಾಗಿ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಭದ್ರತಾ ಪಡೆಗಳು ಸ್ಥಳದಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ವರದಿಗಳು ಉಲ್ಲೇಖಿಸಿವೆ.