K2kannadanews.in
Crime News ರಾಯಚೂರು : ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ಪತಿಯನ್ನ ಕೃಷ್ಣಾ ನದಿಗೆ ತಳ್ಳಿದ ಆರೋಪ ಪ್ರಕರಣದಲ್ಲಿ, ಸಾಕಷ್ಟು ಪಿಸ್ಟುಗಳ ನಂತರ ಎರಡು ಪ್ರಕರಣ ದಾಖಲಾಗಿದ್ದವು. ಇದೀಗ ಆರೋಪಿ ತಾತಪ್ಪ ಪೊಲೀಸರ ಅತಿಥಿಯಾಗಿದ್ದಾನೆ.
ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ಪತಿಯನ್ನ ಕೃಷ್ಣಾ ನದಿಗೆ ತಳ್ಳಿದ ಆರೋಪ ಪ್ರಕರಣ. ರಾಜ್ಯ ರಾಷ್ಟ್ರ ವ್ಯಾಪಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಎಲ್ಲಾ ಬೆಳವಣಿಗೆ ನಂತರ, ಈ ಒಂದು ಪ್ರಕರಣಕ್ಕೆ ಟ್ವಿಸ್ಟ್ ದೊರೆಯಿತು. ಪತಿ ತಾತಪ್ಪ ಅಪ್ರಾಪ್ತ ಬಾಲಕಿಯನ್ನು ಮದುವೆ ಮಾಡಿಕೊಂಡಿದ್ದಾನೆ ಎಂಬ ಆಗತಕಾರಿ ವಿಷಯ ತನಿಕೆಯಿಂದ ಹೊರ ಬಿದ್ದಿದೆ. ಬಿರುದ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಬಾಲ್ಯ ವಿವಾಹ ಕಾಯ್ದೆ ಪ್ರಕರಣ ದಾಖಲು ಮಾಡಲಾಯಿತು. ತದನಂತರ ಅಪ್ರಾಪ್ತ ಬಾಲಕಿಯನ್ನ ಮದುವೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯನ್ನು ಕೂಡ ದಾಖಲು ಮಾಡಲಾಯಿತು.
ಇತ್ತೀಚೆಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೂಸಂಬೆ ಬೇಟಿ ವೇಳೆ ಪೊಲೀಸರ ವಿರಯದ್ಧ ಅಸಮಧಾನ ಹೊರಹಾಕಿದ್ದರು. ತಾತಪ್ಪ ನನ್ನು ಅರೆಸ್ಟ್ ಮಾಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಪ್ರಕರಣ ದಾಖಲಾದ ನಂತರ ತಾತ ಎಲ್ಲಿದ್ದಾನೆ, ಆತ ನನ್ನ ಅರೆಸ್ಟ್ ಮಾಡಬೇಕು ಎಂಬ ಕೂಗು ಹೆಚ್ಚಾಗುತ್ತಿದ್ದಂತೆ ಪೊಲೀಸರು ಅಲರ್ಟಾಗಿ ಇದೀಗ ಆರೋಪಿ ತಾತಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿ ತಾತಪ್ಪನನ್ನು ಆರೋಗ್ಯ ತಪಾಸಣೆಗೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಅಲ್ಲಿಂದ ನೇರವಾಗಿ ಮಹಿಳಾ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದು, ತನಿಖೆ ಆರಂಭಿಸಿದ್ದು ನಾಳೆ ನ್ಯಾಯಾಧೀಶರ ಮುಂದೆ ಪ್ರಸ್ತುತಪಡಿಸಬಹುದು ಎಂಬ ಮಾಹಿತಿ ಇದೆ.