K2kannadanews.in
Local News ಲಿಂಗಸುಗೂರ : ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಈ ವೇಳೆ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಆದೇಶ.
ರಾಯಚೂರು ಜಿಲ್ಲೆಯ ಲಿಂಗಸುಗೂರ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯಕ್ಕೆ ಸರಿಯಾದ ಸ್ಪಂದನೆ ಮತ್ತು ಸಹಕಾರ ನೀಡುತ್ತಿರಲಿಲ್ಲ. ಇದರಿಂದ ಪ್ರಗತಿ ಕುಂಠಿತವಾಗಿದೆ ಎಂದು ತಹಶೀಲ್ದಾರ್ ಸತ್ಯಮ್ಮ ಅವರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು. ಇದರಿಂದ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ಅಮಾನತು ಆದೇಶ ಹೊರಡಿಸಿದ್ದಾರೆ ಎನ್ನಲಾಗುತ್ತಿದೆ.