K2kannadanews.in
Local News ರಾಯಚೂರು : ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ ಸ್ಥಳದಿಂದ, ರಾಯಚೂರು ಮುಖ್ಯ ರಸ್ತೆಯವರೆಗೂ ರಸ್ತೆ ಸಂಪೂರ್ಣ ಹಾಳಾಗಿದ್ದು, ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದ ಆಗಮಿಸುವ ಭಕ್ತಾದಿಗಳ ಮುಂದೆ ಪಂಚಾಯತಿ ಮಾನ ಹರಾಜಾಗುತ್ತಿದ್ದರೂ ಗಮನ ಹರಿಸುತ್ತಿಲ್ಲ ತಾಲ್ಲೂಕು ಆಡಳಿತ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬಿಚ್ಚಲಿ ಗ್ರಾಮದಲ್ಲಿ ರಸ್ತೆ ಮಾತ್ರ ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ, ರಸ್ತೆ, ಶಾಲೆಗಳಿಗೆ ಯಾವುದೇ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲ ಎಂದು ತುರುವೇಕೆರೆಯ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಅಧ್ಯಕ್ಷ ಸಿದ್ದಲಿಂಗೇಗೌಡ ಅವರು ತಾಲೂಕು ಪಂಚಾಯತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ತಾಲೂಕ ಪಂಚಾಯತಿ ಅಧಿಕಾರಿಗಳು ಅಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಮಸ್ಯೆಗಳನ್ನ ಬಗೆಹರಿಸುವಂತೆ ಮತ್ತು ರಸ್ತೆ ನಿರ್ಮಾಣಕ್ಕೆ ಮುಂದಾಗುವಂತೆ ಸೂಚನೆ ನೀಡಿದರು ಆದರೆ ಮೇಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ಕೊಡದೆ ಇವತ್ತಿಗೂ ಕೂಡ ಅಲ್ಲಿ ರಸ್ತೆ ಸುಧಾರಣೆ ಮಾಡುವತ್ತ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಪ್ರಸ್ತುತ ಹದಗೆಟ್ಟ ರಸ್ತೆಯಲ್ಲಿ ಬರುವ ಭಕ್ತರು ಪ್ರಯಾಣಿಕರು ರಸ್ತೆಯಲ್ಲಿ ಬಂದರೆ ಮತ್ತೊಮ್ಮೆ ಬರಬಾರದು ಎಂಬ ನಿಟ್ಟಿನಲ್ಲಿ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ರಸ್ತೆ ನಿರ್ಮಾಣ ಮಾಡಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುತ್ತಾರೆ ಕಾದು ನೋಡಬೇಕಿದೆ.