
ಮಾನ್ವಿ : ಆರತಕ್ಷತೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಎಮ್ಮೆ ಅಡ್ಡ ಬಂದ ಹಿನ್ನೆಲೆ ಕ್ರೂಸರ್, ಟಂಟಂ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಾಲಕಿ ಹಾಗೂ ಊರ್ವ ವೃದ್ಧಿ ಗಂಭೀರವಾಗಿ ಗಾಯಗೊಂಡು ಹತ್ತು ಜನಕ್ಕೆ ಸಣ್ಣ ಪುಟ್ಟ ಗಾಯಗಳಾದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹುಸೇನ್‌ನಗರ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನ ಮಾನ್ವಿ ತಾಲೂಕಿನ ಸಿಕಲ್ ಗ್ರಾಮಕ್ಕೆ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದವರು ಕಲ್ಮಲಾ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಘಟನೆ ಘಟನೆ ಜರುಗಿದೆ. ಹುಸೇನ್‌ನಗರ ಕ್ಯಾಂಪ್ ಬಳಿ ವಾಹನ ಬಂದಾಗ ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಎಮ್ಮೆ ಅಡ್ಡ ಬಂದಿದೆ. ಎಮ್ಮೆಯನ್ನು ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂಟಂ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಾಲಕಿ ಹಾಗೂ ಓರ್ವ ವೃದ್ದೆಯ ಪರಸ್ಥಿತಿ ಗಂಭೀರವಾಗಿದ್ದು, ಒಟ್ಟಾರೆ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಬಗ್ಗೆ ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಸಿರವಾರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಘಾತ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು.
![]() |
![]() |
![]() |
![]() |
![]() |
[ays_poll id=3]