ರಾಯಚೂರು : ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 66ನೇ ಪರಿನಿರ್ವಾಣದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆ ಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 6 ರಂದು ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಂಆರ್ ಭೇರಿ ಹೇಳಿದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷಗಳಾದರೂ ದಲಿತರಿಗೆ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ. ಸಂವಿಧಾನದ ಆಶಯಗಳು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳು ಅಧಃಪತನವಾಗುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಮಾತಾಗಿದೆ. ದೇಶದಲ್ಲಿ ನಿರುದ್ಯೋಗ, ಯುವಕರು ಹೇಳಿದರು. ಹತಾಶೆಗೆ ದೂಡಿದೆ. ಕೋಮು ರಾಜಕಾರಣದಿಂದ ಪ್ರಗತಿಗೆ, ಜಾತ್ಯಾತೀತ ತತ್ವಕ್ಕೆ ಅಪಹಾಸ್ಯವಾಗಿದೆ ಎಂದು ದೂರಿದರು.
ಸ್ವಾತಂತ್ರ್ಯ, ಸಮಾನತೆ, ಸಹೋರತ್ವ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶಮಾಡುತ್ತಿರುವ ಆರ್ ಎಸ್‌ಎಸ್ ಬಿಜೆಪಿ ದುರಾಡಳಿತದ ವಿರುದ್ಧ ದಲಿತರ ಸಾಂಸ್ಕೃತಿಕ ಪ್ರತಿರೋಧ ದಲಿತ ಸಂಘಟನಯ ಬೃಹತ್ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ತಿಖಿಸಿದರು. ಜಿಲ್ಲೆಯ ದಲಿತಪರ ಸಂಘಟನೆಗಳು ಮುಖಂಡರು, ಸಮಾಜದ ಮುಖಂಡರು ಸಾವಿರಾರು ಸಂಖ್ಯೆಯಲ್ಲಿ ಸಮಾವೇಶಕ್ಕೆ ತೆರಳಿದ್ದು ಬಂಡಾಯ ಸಾಹಿತಿ ಬಾಬುಭಂಡಾರಿಗಲ್ ಅವರನ್ನು ಜಿಲ್ಲಾ ಪ್ರತಿನಿಧಿಯಾಗಿ ನೇತೃತ್ವ ವಹಿಸಲಿದ್ದಾರೆ ಎಂದು ಹೇಳಿದರು.
![]() |
![]() |
![]() |
![]() |
![]() |
[ays_poll id=3]