
K2 ನ್ಯೂಸ್ ಡೆಸ್ಕ್ : ಶಾಲೆಗಳ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಮಕ್ಕಳಿಗೆ ಪ್ರವೇಶ ಮತ್ತು ಇತರೆ ಸೌಲಭ್ಯಗಳನ್ನು ನಿರಾಕರಿಸಬಾರದು ಎಂದು ಪುನರುಚ್ಚರಿಸಿದೆ. ಕೆಲವು ಶಾಲೆಗಳು ಇನ್ನೂ ಆಧಾರ್ ಕೇಳುತ್ತಿವೆ ಎಂಬ ಸುದ್ದಿಗೆ ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮೇಲೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಶಾಲಾ ಆಡಳಿತ ಮಂಡಳಿಗಳು ಪಡೆಯುತ್ತಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೆ ದಾಖಲಾತಿ ನಿರಾಕರಿಸಿ ಸೌಲಭ್ಯಗಳನ್ನು ನೀಡುವಲ್ಲಿ ತಾರತಮ್ಯ ತೋರಲಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ. ಈ ಒಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಹೇಳಿಕೆ ನೀಡುತ್ತಿದ್ದಂತೆ ಮಕ್ಕಳು ಮತ್ತು ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
![]() |
![]() |
![]() |
![]() |
![]() |
[ays_poll id=3]