
ರಾಯಚೂರು : ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ, ಗರ್ಭಪಾತಗಳು ನಡೆಯುತ್ತಿವೆ. ಒಂದು ಆಸ್ಪತ್ರೆ ಮೇಲೂ ಒಂದು ಕೇಸ್ ಬುಕ್ ಆಗಿಲ್ಲ ಎಂದು ರಾಯಚೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ರಾಯಚೂರು ನಗರದ ಸರ್ಕಿಟ್ ಹೌಸ್ ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಜಿಲ್ಲೆ ಹಿಂದೆ ಬಿದ್ದಿದೆ, ಜಿಲ್ಲೆಯ ಅಧಿಕಾರಿಗಳು ಕಳಪೆಮಟ್ಟದ ಸಾಧನೆ ಮಾಡಿದ್ದಾರೆ. ಕೂಡಲೇ ಅವರನ್ನು ಅಮಾನತ್ತು ಮಾಡಬೇಕಿತ್ತು. ಅವರಿಗೆ ಮೂರು ತಿಂಗಳು ಕಾಲಾವಕಾಶ ಕೊಟ್ಟಿದ್ದೇನೆ. ಪ್ರಗತಿ ಸಾಧಿಸದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಡಿಎಚ್‌ಓ ಗೂ ಎಚ್ಚರಿಕೆ ಕೊಟ್ಟಿದ್ದೇನೆ ಎಂದು ಅಧಿಕಾರಿಗಳ ವಿರುದ್ಧ ಗುಡುಗಿದರು.
ಇನ್ನು ಜಿಲ್ಲೆಯಲ್ಲಿ ಜನಸಂಖ್ಯೆಯ ಆಧಾರದ ಮೇಲೆ ತಪಾಸಣೆಗಳು ನಡೆಸುವಲ್ಲಿ ಲೋಪದೋಷಗಳು ಕಂಡು ಬರುತ್ತಿವೆ. ಜಿಲ್ಲೆಯ ಜನರಲ್ಲಿನ ಆರೋಗ್ಯ ಸಮಸ್ಯೆಗಳನ್ನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ಹಿಂದೆ ಬಿದ್ದಿದ್ದಾರೆ. ಲಿಂಗಾನುಪಾತದಲ್ಲೂ ಭಾರೀ ವ್ಯತ್ಯಾಸ ಕಂಡುಬರುತ್ತಿದೆ. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ, ಎಲ್ಲೋ ಒಂದು ಕಡೆ ಗರ್ಭಪಾತಗಳು ನಡೆಯುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿದರು. ಕಾರಣ ಒಂದು ಆಸ್ಪತ್ರೆ ಮೇಲೂ ಒಂದು ಕೇಸ್ ಬುಕ್ ಆಗಿಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.
![]() |
![]() |
![]() |
![]() |
![]() |
[ays_poll id=3]