
ದೇವದುರ್ಗ : ಶಾಸಕರಾದ ಕರೆಮ್ಮ ಜಿ.ನಾಯಕ ವಿರುದ್ದ ಅಶ್ಲೀಲ ಪದಗಳನ್ನು ಬಳಸಿ ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಸಿಪಿಐಎಂ ಪಕ್ಷದ ಕಾರ್ಯದರ್ಶಿ ನರಸಣ್ಣ ನಾಯಕ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಚುನಾಯಿತ ಪ್ರತಿನಿಧಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿ, ಹಲ್ಲೆ ಮಾಡಲು ಮುಂದಾಗಿರುವ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗಿದೆ. ಆದ್ರೆ ಒವ೯ನನ್ನು ಮಾತ್ರ ಬಂಧಿಸಿ ಉಳಿದವನ್ನು ಬಂಧಿಸುವಲ್ಲಿ, ಪೊಲೀಸ್ ಇಲಾಖೆ ಮೀನಾಮೇಷ ಮಾಡುತ್ತಿರುವುದು ಸರಿಯಾದ ಕ್ರಮ ಅಲ್ಲ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಪೊಲೀಸರ ವೈಫಲ್ಯದಿಂದ ಶಾಸಕರಿಗೆ ರಕ್ಷಣೆ ಇಲ್ಲವಾಗಿದೆ. ತಾಲ್ಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕಿನಲ್ಲಿ ನಡೆಯುವ ಪ್ರತಿಯೊಂದು ಅಕ್ರಮ ದಂಧೆಗಳ ಬಗ್ಗೆ ಮತ್ತು ಆ ದಂಧೆಗಳ ಸೂತ್ರಧಾರಿ ಯಾರು ಎನ್ನುವುದನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]