This is the title of the web page
This is the title of the web page
State News

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳ ಜಾರಿ


K2 ನ್ಯೂಸ್ ಡೆಸ್ಕ್: ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು,ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಹಂತಹಂತವಾಗಿ ನಿಯಮಗಳನ್ನು ಜಾರಿ ತರಲಾಗುವುದು ಎಂದರು.

*ಹೊಸ ವರ್ಷ ಆಚರಣೆ :* ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಉತ್ತರಿಸಿ, ಪ್ರತಿ ಬಾರಿಯಂತೆ ಈ ವರ್ಷವೂ ನಿಯಮಗಳಿದ್ದು, ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಸೇರಿಸಲಾಗುವುದು. ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜಾರಿ ಮಾಡಲಾಗುವುದು ಎಂದರು.


[ays_poll id=3]