
ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸಾಕಷ್ಟು ಇದ್ದು, ಸಮರ್ಪಕವಾಗಿ ಜಿಲ್ಲೆಯಲ್ಲಿ ಯೋಜನೆಗಳು ಜಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣು ಪ್ರಕಾಶ್ ಪಾಟೀಲ್ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು ಗ್ಯಾರೆಂಟಿ ಯೋಜನಯಲ್ಲಿ, ಪ್ರಥಮವಾಗಿ ಜಾರಿಯಾದ ಶಕ್ತಿ ಯೋಜನೆಯಲ್ಲಿ ಇದುವರೆಗೂ ಜಿಲ್ಲೆಯಾದ್ಯಂತ 67,34,000 ಮಹಿಳೆಯರು ಇದರ ಲಾಭ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲಿ 2,67,೦11 ಜನ ಇದರ ಲಾಭ ಪಡೆಯುತ್ತಿದ್ದಾರೆ. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ ಜಿಲ್ಲೆಯಾದ್ಯಂತ 3,37,286 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ ಮತ್ತು ಗೃಹಲಕ್ಷ್ಮಿ ಯೋಜನೆಗೆ ಇದುವರೆಗೆ ಜಿಲ್ಲೆಯಾದ್ಯಂತ 3,57,852 ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಆಡಳಿತದ ಸರ್ಕಾರ ರಾಜ್ಯ ಬೊಕ್ಕಸದ ಒಂದು ಸಿಂಹ ಪಾಲನ್ನು ರಾಜ್ಯದ ಜನರ ಬಡವರ ಮನೆಗೆ ತಲುಪಿಸುವಂತಹ ಕೆಲಸ ಮಾಡಿದೆ ಎಂದರು.
![]() |
![]() |
![]() |
![]() |
![]() |
[ays_poll id=3]