K2kannadanews.in
Murder case ಲಿಂಗಸೂಗೂರು : ಇತ್ತೀಚೆಗೆ ಐದನಾಳ ಗ್ರಾಮದಲ್ಲಿ ಜರುಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ ಅವರು ಭೇಟಿ ನೀಡಿ ಪರಿಶೀಲನೆ ಮಾಡಿ ಸ್ಥಳೀಯರನ್ನು ವಿಚಾರಣೆ ನಡೆಸಿ ಮಾಹಿತಿ ಪಡೆದರು.
ಹೌದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದಲ್ಲಿ, ಪಾರ್ಟಿ ಹೆಸರಿನಲ್ಲಿ ಕೊಲೆ ಮಾಡಲಾಗಿದೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ರಾಯಚೂರು ಎಸ್ಪಿ ಪುಟ್ಟಮಾದಯ್ಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಯುವಕರು ಹಾಗೂ ಅಕ್ಕ- ಪಕ್ಕದ ಜನರನ್ನು ವಿಚಾರಣೆ ನಡೆಸಿ ಪ್ರಕರಣದ ಬಗ್ಗೆ ಮಾಹಿತಿಯನ್ನು ಪಡೆದರು.
ಈ ವೇಳೆ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ, ಲಿಂಗಸುಗೂರು ಠಾಣೆಯ ಪೊಲೀಸ್ ಇನ್‍ಸ್ಪೆಕ್ಟರ್ ಪುಂಡಲಿಕ ಪಟತ್ತರ್ ಇದ್ದರು. ಕೊಲೆ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಸಬೇಕು. ಪ್ರಕರಣದ ಸುತ್ತ ಎಷ್ಟೇ ಗೊಂದಲಗಳಿರಲಿ. ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು. ನೊಂದವರಿಗೂ ನ್ಯಾಯ ಸಿಗಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದರು.