
K2 ಪೊಲಿಟಿಕಲ್ ನ್ಯೂಸ್ : ಜಿಲ್ಲೆಯಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಸಚಿವ NS ಭೋಸರಾಜು ನೇತೃತ್ವದ ಜನಪ್ರತಿನಿಧಿಗಳ ನಿಯೋಗವು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಈವರೆಗೆ ಏಮ್ಸ್ ಸ್ಥಾಪನೆಯಾಗಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿದ್ದೇವೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯ ಸರ್ಕಾರ ಶಿಫಾರಸು ಮಾಡಿದ ಜಾಗದಲ್ಲಿ ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಸಿದ್ದರಾಮಯ್ಯ ಅವರೂ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ದೇಶದ 120 ಅಭಿವೃದ್ಧಿ ಆಕಾಂಕ್ಷಿ ಜಿಲ್ಲೆಗಳಲ್ಲಿ ರಾಯಚೂರು ಸಹ ಒಂದು. ಜಿಲ್ಲೆಯಲ್ಲೇ ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಇದು ಕಲ್ಯಾಣ ಕರ್ನಾಟಕ ಭಾಗದ ಜನಪ್ರತಿನಿಧಿಗಳ ಒಕ್ಕೊರಲ ಬೇಡಿಕೆಯೂ ಹೌದು ಎಂದು ಸಚಿವ ಎನ್ ಎಸ್ ಬೋಸ್ ರಾಜ್ ಹೇಳಿದರು.
ಏಮ್ಸ್ ಸ್ಥಾಪಿಸುವ ವಿಚಾರದಲ್ಲಿ ಅಂತಿಮ ನಿರ್ಧಾರ ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ. ಯಾವ ಸ್ಥಳವನ್ನು ಗುರುತಿಸಿ ರಾಜ್ಯ ಸರ್ಕಾರ ಶಿಫಾರಸು ಮಾಡುತ್ತಿಯೋ ಅಲ್ಲಿ ಏಮ್ಸ್ ಸ್ಥಾಪಿಸಲಾಗುವುದು. ಈಗಾಗಲೇ ರಾಯಚೂರು ಹೆಸರನ್ನ ಸೂಚಿಸಿದ್ದು ಪ್ರಧಾನಮಂತ್ರಿಗಳೊಂದಿಗೆ ಚರ್ಚೆ ಮಾಡಿ ಒಂದು ತಂಡ ರಚನೆ ಮಾಡಿ ರಾಯಚೂರಿಗೆ ಕಳುಹಿಸಲಾಗುವುದು. ತಂಡ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ತದನಂತರ ಏಮ್ಸ್ ಸ್ಥಾಪನೆಗಾಗಿ 2000 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
![]() |
![]() |
![]() |
![]() |
![]() |
[ays_poll id=3]