ಆಲ್ಕೊಡ್ ಕಸ್ತೂರಬಾ ವಸತಿ ಶಾಲೆ : ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ..

K 2 Kannada News
ಆಲ್ಕೊಡ್ ಕಸ್ತೂರಬಾ ವಸತಿ ಶಾಲೆ : ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ..
WhatsApp Group Join Now
Telegram Group Join Now

K2kannadanews.in

students sick ಸಿರವಾರ : ಆಲ್ಕೋಡ್ ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಆಸ್ಪತ್ರೆ ಪಾಲಾದ ಘಟನೆ ಆಲ್ಕೊಡ ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇ‌ನ್ನೂ ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ. ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲವೇ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

WhatsApp Group Join Now
Telegram Group Join Now
Share This Article