
ರಾಯಚೂರು : ಜಿಲ್ಲಾಡಳಿತ ವತಿಯಿಂದ ಜನವರಿ 21 ರಂದು ನಗರದ ಮಹಿಳಾ ಸಮಾಜದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಸಮಾಜದ ಅಧ್ಯಕ್ಷ ಕೆ. ಶಾಂತಪ್ಪ ಹೇಳಿದರು.
ಅಂದು ಬೆಳಗ್ಗೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಬಿ ಮುನೇನಕೊಪ್ಪ, ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರು ವಿವಿಧ ಸಮುದಾಯದ ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು ಭಾಗವಹಿಸಿದ್ದಲ್ಲಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.ಈ ಮೆರವಣಿಗೆಯಲ್ಲಿ 12 ರಿಂದ 15 ಸಾವಿರ ಜನ ಸೇರಲಿದ್ದಾರೆ. ಸಮಾಜಕ್ಕೆ ಸೇವೆ ಸಲ್ಲಿಸಿದ ಹಿರಿಯರಿಗೆ ಸನ್ಮಾನ ಮಾಡಲಾಗುವುದು, ಹಾಗೂ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
![]() |
![]() |
![]() |
![]() |
![]() |
[ays_poll id=3]