
K2 ಪೊಲಿಟಿಕಲ್ ನ್ಯೂಸ್ : ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಹಾರಿಸುವ ಮಹತ್ವದ ಚಿಂತನೆಯನ್ನು ಸಭೆಯ ಕೇಂದ್ರ ಬಿಂದುವನ್ನಾಗಿ ಮಾಡಿಕೊಂಡು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಬಲಗೊಳಿಸುವ ಮಹತ್ವದ ಸಭೆ ಮುಕ್ತಾಯಗೊಂಡಿದೆ.
ಶತಾತ ಗತಾಯ ಜಗದೀಶ್ ಶೆಟ್ಟರ್ ಅವರಿಗೆ ಠಕ್ಕರ್ ಕೊಡಲು ರಣತಂತ್ರ ರೂಪಿಸಿದ್ದು, ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿ ಮತಗಳನ್ನು ಭದ್ರಪಡಿಸುವುದರ ಜೊತೆಗೆ ಇನ್ನುಳಿದ ಮತಗಳನ್ನು ಬಿಜೆಪಿಯತ್ತ ಸೆಳೆಯುವ ಬಗ್ಗೆ ಚುನಾವಣಾ ಚಾಣಕ್ಯ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಒಟ್ಟಿನಲ್ಲಿ ಬಿಜೆಪಿ ಬಾವುಟವನ್ನು ಮತ್ತಷ್ಟು ರಾರಾಜಿಸುವಂತೆ ಮಾಡಲು ಕಾರ್ಯಕರ್ತರು ಹಾಗೂ ನಾಯಕರ ಶ್ರಮಿಸುತ್ತಿದ್ದು, ಇಂತಹದೊಂದು ಮಹತ್ವದ ಸಭೆಗೆ ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಾಥ್ ನೀಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]