
K2 ಜಾಬ್ ನ್ಯೂಸ್ : ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡಲು ಕಾಯುತ್ತಿರುವ ಯುವಕರಿಗೆ ಗುಡ್ ನ್ಯೂಸ್. ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ಆಯ್ಕೆ ಮಾಡಲಾಗುವ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ.
*ಇಲಾಖೆ ಹೆಸರು: IBPS
*ಅರ್ಜಿ ಸಲ್ಲಿಸುವ ಬಗೆ : online
*ಹುದ್ದೆಯ ಹೆಸರು: ಕ್ಲರ್ಕ್
*ಒಟ್ಟು ಹುದ್ದೆಗಳ ಸಂಖ್ಯೆ: 4045
*ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು
*ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
*ವಯೋಮಿತಿ ಅರ್ಹತೆಗಳು: ದಿನಾಂಕ 01/07/2023ಕ್ಕೆ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷ ಆಗಿರಬೇಕು.
*SC/ST ಅಭ್ಯರ್ಥಿಗಳಿಗೆ 5 ವರ್ಷ,
OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತುಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ
* ಯಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು : 175/-
ಉಳಿದ ಅಭ್ಯರ್ಥಿಗಳು : 850/-
*ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
*ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
*ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದಾರೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
*ಅರ್ಜಿ ಸಲ್ಲಿಸಲು ಆರಂಭಿಕ *ದಿನಾಂಕ: 01.07.2023
*ಅರ್ಜಿ ಸಲ್ಲಿಸಲು ಕೊನೆಯ *ದಿನಾಂಕ: 21.07.2023
*ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21.07.2023
*ಪ್ರಿಲಿಮಿನರಿ ಪರೀಕ್ಷೆ : ಆಗಸ್ಟ್/ ಸೆಪ್ಟೆಂಬರ್ 2023
*ಮುಖ್ಯ ಪರೀಕ್ಷೆ : ಅಕ್ಟೋಬರ್ 2023
IBPS ಕ್ಲಕ೯ ಕರೆದಿರುವ ಲಿಂಕ್ ಗಳು ಇಲ್ಲಿವೆ.
*ಆಫಿಸಿಯಲ್ ವೆಬ್ ಸೈಟ್: https://www.ibps.in/
*ಅಧಿಸೂಚನೆ : https://www.ibps.in/wp-content/uploads/Final_Notification_CRP_CLERKS_XIII_30.6.23.pdf
*ಅರ್ಜಿ ಲಿಂಕ್: https://ibpsonline.ibps.in/crpcl13jun23/
![]() |
![]() |
![]() |
![]() |
![]() |
[ays_poll id=3]