This is the title of the web page
This is the title of the web page
National NewsState News

CISF ನಲ್ಲಿ 11,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ


K2kannadanews.in

ಜಾಬ್ ನ್ಯೂಸ್ : ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಉದ್ಯೋಗ (GOVERNMENT JOB) ಪಡೆಯಲು ಯೋಜಿಸುತ್ತಿರುವ ಅಭ್ಯರ್ಥಿಗಳು ಎಸ್‌ಎಸ್ಸಿಯ(SSC) ಅಧಿಕೃತ ವೆಬ್ಸೈಟ್ ssc.nic.in ಭೇಟಿ ನೀಡುವ ಮೂಲಕ ಅರ್ಜಿ(apply) ಸಲ್ಲಿಸಬಹುದು.

CISFನಲ್ಲಿ ಒಟ್ಟು 11025 ಹುದ್ದೆಗಳನ್ನು ನೇಮಕ ಮಾಡಲು ಆದೇಶ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31, 2023ರೊಳಗೆ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಶುಲ್ಕ ಪಾವತಿಸಲು ಜನವರಿ 1, 2024 ಕೊನೆಯ ದಿನಾಂಕವಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2024 ಕ್ಕೆ ಅನ್ವಯವಾಗುವಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST), ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET), ವೈದ್ಯಕೀಯ ಪರೀಕ್ಷೆ ಮತ್ತು ಡಾಕ್ಯುಮೆಂಟ್ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE) ಅನ್ನು ಆಯೋಗವು ಇಂಗ್ಲಿಷ್, ಹಿಂದಿ ಮತ್ತು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಿದೆ.


[ays_poll id=3]