This is the title of the web page
This is the title of the web page
Politics News

ಮತ ಪಟ್ಟಿ ಪರಿಷ್ಕರಣ ಕಾರ್ಯಕ್ಕೆ ಶಿಕ್ಷಕರ ನೇಮಕ : ಪಾಠಕ್ಕೆ ಕುತ್ತು..!


K2 ನ್ಯೂಸ್ ಡೆಸ್ಕ್ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 60,000 ಶಿಕ್ಷಕರನ್ನ ನಿಯೋಜಿಸಿಕೊಂಡಿದ್ದು ಎಲ್ಲೋ ಒಂದು ಕಡೆ ಶೈಕ್ಷಣಿಕ ಹಿನ್ನಡೆಯಾಗುವ ಆತಂಕ ಕಾಡುತ್ತಿದೆ.

ಚುನಾವಣಾ ಆಯೋಗ ರಾಜ್ಯದಲ್ಲಿರುವ 45 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಇರುವ ಮಕ್ಕಳಿಗೆ ಪಾಠ ಮಾಡಲು 1.56 ಲಕ್ಷ ಶಿಕ್ಷಕರಿದ್ದು, ಈ ಪೈಕಿ ಸುಮಾರು 60 ಸಾವಿರ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿಪರಿಷ್ಕರಣೆಗೆ ಬ್ಲಾಕ್‌ ಹಂತದ ಅಧಿಕಾರಿಗಳಾಗಿ (ಬಿಎಲ್‌ಒ) ನಿಯೋಜಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗ ಶಿಕ್ಷಕರ ಜತೆಗೆ ವಿವಿಧ ಇಲಾಖೆಗಳ ನೌಕರರನ್ನು ಮತದಾರ ಪಟ್ಟಿಪರಿಷ್ಕರಣೆಗೆ ನೇಮಿಸಿಕೊಳ್ಳಲು ಸೂಚಿಸಿದ್ದರೂ ಶಿಕ್ಷಕರನ್ನೇ ಹೆಚ್ಚಾಗಿ ನಿಯೋಜಿಸಿಕೊಂಡಿರುವುದಕ್ಕೆ ಶಿಕ್ಷಕರು, ಪೋಷಕರು ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿ ಶಾಲೆಯಲ್ಲಿ ಒಬ್ಬ ಶಿಕ್ಷಕರನ್ನು ಬಿಎಲ್‌ಒಗಳಾಗಿ ನಿಯೋಜಿಸಿದರೆ ಉಳಿದ ಶಿಕ್ಷಕರು ಹೇಗೋ ಅವರ ಬೋಧನಾ ಕಾರ್ಯವನ್ನು ಸರಿದೂಗಿಸಿಕೊಳ್ಳಬಹುದು. ಆದರೆ, ಹಲವು ಶಾಲೆಗಳಲ್ಲಿ ಇಬ್ಬರು, ಮೂವರು ಶಿಕ್ಷಕರನ್ನು ನಿಯೋಜಿಸಲಾಗಿದೆ.

ಶಿಕ್ಷಕರ ಕೊರತೆ ಎದುರಿಸುತ್ತಿರುವ ಶಾಲೆಗಳಲ್ಲಿ ಈಗ ಶೈಕ್ಷಣಿಕ ಚಟುವಟಿಕೆಗಳಿಗೆ ಇನ್ನಷ್ಟು ಸಮಸ್ಯೆಯಾಗಲಿದೆ ಎನ್ನುತ್ತಾರೆ ವಿವಿಧ ಶಾಲಾ ಎಸ್‌ಡಿಎಂಸಿಗಳ ಅಧ್ಯಕ್ಷರು ಹಾಗೂ ಸದಸ್ಯರು. ಕೋವಿಡ್‌ನಿಂದಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ತರಬೇತಿಗೆ ವರ್ಷವಿಡೀ ‘ಕಲಿಕಾ ಚೇತರಿಕೆ’ ಕಾರ್ಯಕ್ರಮ ರೂಪಿಸಲಾಗಿದೆ. ಪಠ್ಯ ಪರಿಷ್ಕರಣೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಪಠ್ಯಪುಸ್ತಕಗಳು ಶಾಲೆಗಳಿಗೆ ತಡವಾಗಿ ತಲುಪಿದ ಕಾರಣ ಶೇ.40ರಷ್ಟುಪಠ್ಯ ಬೋಧನೆ ಬಾಕಿ ಇದೆ.

ಈ ಬಾರಿ 5 ಮತ್ತು 8ನೇ ತರಗತಿಗೆ ಸರ್ಕಾರ ಪರೀಕ್ಷೆ ನಡೆಸುವುದಾಗಿ ಹೇಳಿದೆ. 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಪ್ರಾಂಶುಪಾಲರು, ಬಿಇಒ, ಡಿಡಿಪಿಐಗಳನ್ನು ಈ ಬಗ್ಗೆ ಪ್ರಶ್ನಿಸಿದರೆ ಸರ್ಕಾರ ಹೇಳಿದಂತೆ ನಾವು ಕೇಳಬೇಕಾಗುತ್ತದೆ ಎನ್ನುತ್ತಾರೆ.


[ays_poll id=3]