![]() |
![]() |
![]() |
![]() |
![]() |
K2 ನ್ಯೂಸ್ ಡೆಸ್ಕ್: 2023ರ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಎದುರು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಜೆಡಿಎಸ್ ಈಗಾಗಲೇ ಪಟ್ಟಿ ಬಿಡುಗಡೆ ಮಾಡಿ ಕೆಲ ಕ್ಷೇತ್ರಗಳನ್ನ ಉಳಿಸಿಕೊಂಡಿದೆ ಅಂತೇಯೇ ಕಾಂಗ್ರೆಸ್‌ನವರು ಶನಿವಾರ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ, ಮಾಜಿ ಶಾಸಕರು ಇದ್ದಾರೆ. ಆಶ್ಚರ್ಯಕರ ಅಭ್ಯರ್ಥಿ ಯಾರೂ ಇಲ್ಲ. ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ನಿರ್ಧರಿಸುವುದು ಅವರು ಮತ್ತು ಅವರ ಪಕ್ಷ. ನಾವು ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ ಎಂದರು.
ಬಿಜೆಪಿ ಪಕ್ಷ ಏಪ್ರಿಲ್ ಮೊದಲ ವಾರದಲ್ಲಿ ತನ್ನ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ.
![]() |
![]() |
![]() |
![]() |
![]() |
[ays_poll id=3]