
K2 ನ್ಯೂಸ್ ಡೆಸ್ಕ್ : ಮಗ ಹಾಗೂ ಸೊಸೆಯ ಮೇಲೆ ಮುನಿಸಿನಿಂದ ವ್ಯಕ್ತಿಯೊಬ್ಬ 1.5 ಕೋಟಿ ಸ್ಥಿರಾಸ್ತಿಯನ್ನು ರಾಜ್ಯಪಾಲರಿಗೆ ಉಡುಗೊರೆಯಾಗಿ ನೀಡಿರುವ ಸ್ವಾರಸ್ಯಕರ ಪ್ರಕರಣ ವರದಿಯಾಗಿದೆ.
ಮುಜಾಫರ್‌ನಗರದ ಬಿರಲ್ ಗ್ರಾಮದ ನಿವಾಸಿಯಾಗಿರುವ ಸಿಂಗ್, ಪ್ರಸ್ತುತ ವೃದ್ಧಾಶ್ರಮವೊಂದರಲ್ಲಿ ವಾಸವಿದ್ದಾರೆ. ಇವರಿಗೆ ಮಗ ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. ನನ್ನ ಯಾವ ಮಕ್ಕಳಿಗೂ ಈ ಆಸ್ತಿಯ ಉತ್ತರಾಧಿಕಾರತ್ವ ನೀಡಲು ಬಯಸುವುದಿಲ್ಲ. ಆದ್ದರಿಂದ ಮರಣದ ಬಳಿಕ ಈ ಎಲ್ಲ ಆಸ್ತಿಗಳನ್ನು ಉತ್ತರ ಪ್ರದೇಶದ ರಾಜ್ಯಪಾಲರಿಗೆ ನೀಡುವ ಸಂಬಂಧ ಅಫಿಡವಿಟ್ ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಭೂಮಿಯಲ್ಲಿ ಸರಕಾರಿ ಶಾಲೆ ಅಥವಾ ಆಸ್ಪತ್ರೆ ನಿರ್ಮಿಸಬೇಕು ಎನ್ನುವುದು ಅವರ ಬಯಕೆ. ಈ ವಯಸ್ಸಿನಲ್ಲಿ ನಾನು ಮಗ- ಸೊಸೆ ಜತೆ ವಾಸ ಇರಬೇಕು. ಆದರೆ ಅವರು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಈ ಕಾರಣದಿಂದ ಆಸ್ತಿಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸುವ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಸಿಂಗ್ ಸ್ಪಷ್ಟಪಡಿಸಿದರು.
![]() |
![]() |
![]() |
![]() |
![]() |
[ays_poll id=3]