
ರಾಯಚೂರು : ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಹಿನ್ನೆಲೆಯಲ್ಲಿ ಗಣಿಧಣಿ ಗಾಲಿ ಜನಾರ್ದನ್ ರೆಡ್ಡಿ ಅವರ ಮಿಡ್ ನೈಟ್ ಪಾಲಿಟಿಕ್ಸ್ ಆರಂಭವಾಗಿದೆ. ರಾತ್ರೋರಾತ್ರಿ ಬಿಜೆಪಿ ಮಾಜಿ ಶಾಸಕ ಪ್ರತಾಪ್ಗೌಡ ಪಾಟೀಲ್ ರೆಡ್ಡಿಯನ್ನ ಭೇಟಿ ಮಾಡಿದ್ದಾರೆ.
ಜನಾರ್ದನ್ ರೆಡ್ಡಿ ಹೊಸ ಪಕ್ಷದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಾಜಕೀಯ ಬೆಳವಣಿಗೆ ಗರಿಗೆದರಿದೆ. ರಾಯಚೂರಿನ ಮಸ್ಕಿ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ 3 ಬಾರಿ ಪ್ರತಾಪ್ಗೌಡ ಪಾಟೀಲ್ ಶಾಸಕರು ಆಗಿದ್ದರು. ಆದ್ರೆ ನಂತರದ ದಿನಗಳಲ್ಲಿ ಕಾಂಗ್ರೆಸ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್-ಜೆಡಿಎಸ್ನ ಸಮ್ಮಿಶ್ರ ಸರ್ಕಾರವನ್ನ ಕೆಡವಿದ್ದರು. ಬಳಿಕ ಮಸ್ಕಿಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್ಗೌಡ ಸೋತಿದ್ದರು. ಹೀಗಾಗಿ ಅವರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿರಲಿಲ್ಲ. ಮತ್ತೆ ಪಕ್ಷ ಬದಲಾಯಿಸುವ ಆಲೋಚನೆಯಲ್ಲಿರುವ ಪ್ರತಾಪ್ಗೌಡ ರಾತ್ರೋರಾತ್ರಿ ಜನಾರ್ದನ್ ರೆಡ್ಡಿರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ.
![]() |
![]() |
![]() |
![]() |
![]() |
[ays_poll id=3]