
K2 ಸ್ಪೋರ್ಟ್ಸ್ ನ್ಯೂಸ್ : ಅಕ್ಟೋಬರ್ 05ರಿಂದ ಭಾರತದಲ್ಲೇ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಮಿಂಚಿದ್ದ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆ ಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದಿದ್ದು, ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದಾರೆ.
Rohit Sharma (Captain), Shubman Gill, Virat Kohli, Shreyas Iyer, Suryakumar Yadav, Tilak Varma, KL Rahul, Ishan Kishan, Hardik Pandya (VC), Ravindra Jadeja, Shardul Thakur, Axar Patel, Kuldeep Yadav, Jasprit Bumrah, Mohd. Shami, Mohd. Siraj, Prasidh Krishna
Traveling stand-by…
— BCCI (@BCCI) August 21, 2023
6 ತಂಡಗಳನ್ನು ತಲಾ 3 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ನೇಪಾಳ ‘ಎ’ ಗುಂಪಿನಲ್ಲಿದ್ದು, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ. ಗುಂಪು ಹಂತದಲ್ಲಿ ಪ್ರತಿ ತಂಡ ಇನ್ನುಳಿದ 2 ತಂಡದ ವಿರುದ್ಧ ಒಮ್ಮೆ ಸೆಣಸಲಿದೆ.
ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆವ ತಂಡಗಳು ಸೂಪರ್-4 ಹಂತಕ್ಕೇರಲಿವೆ. ಸೂಪರ್-4ನಲ್ಲಿ ಪ್ರತಿ ತಂಡ ಇನ್ನುಳಿದ 3 ತಂಡದ ವಿರುದ್ಧ ಒಮ್ಮೆ ಆಡಲಿದ್ದು, ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಫೈನಲ್‌ಗೇರಲಿವೆ.
![]() |
![]() |
![]() |
![]() |
![]() |
[ays_poll id=3]